ಜೆಡಿಎಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಎಂ.ಎಸ್. ಸೈಫ್ ಆಲಿ ಆಯ್ಕೆ

June 17, 2020

ಮಡಿಕೇರಿ ಜೂ.17 : ಕೊಡಗು ಜಿಲ್ಲಾ ಜಾತ್ಯಾತೀತ ಜನತಾ ದಳದ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಎಂ.ಎಸ್. ಸೈಫ್ ಆಲಿ ಆಯ್ಕೆಯಾಗಿದ್ದಾರೆ.
ರಾಜ್ಯ ವರಿಷ್ಠರ ಹಾಗೂ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು.

error: Content is protected !!