ಚೀನಾ ವಿರುದ್ಧ ತೀವ್ರ ಅಸಮಾಧಾನ

June 18, 2020

ನವದೆಹಲಿ ಜೂ.18 : ಭಾರತ ಮತ್ತು ಚೀನಾ ಸೈನಿಕರ ನಡುವೆ ಗಾಲ್ವಾನ್ ನಲ್ಲಿ ನಡೆದ ಸಂಘರ್ಷ ಪೂರ್ವನಿಯೋಜಿತ ಕೃತ್ಯ ಎಂದು ಕೇಂದ್ರ ಸರ್ಕಾರ ಚೀನಾ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ತಾರಕಕ್ಕೇರಿದೆ. ಪರಿಣಾಮ ಸೋಮವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಕನಿಷ್ಟ 20 ಸೈನಿಕರು ಮೃತಪಟ್ಟಿದ್ದಾರೆ. ಈ ಘಟನೆಯ ನಂತರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಇಂದು ದೂರವಾಣಿ ಕರೆ ಮೂಲಕ ಚರ್ಚೆ ನಡೆಸಿದ್ದಾರೆ.
ಗಡಿಯಲ್ಲಿ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪೋನ್ ಮೂಲಕ ಚರ್ಚೆ ನಡೆಸಿರುವ ಎರಡೂ ದೇಶದ ನಾಯಕರು, ಈ ಗಡಿ ಸಮಸ್ಯೆಯನ್ನು ಶಾಂತಿಯುತವಾಗಿ ಮತ್ತು ನ್ಯಾಯಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ. ಇನ್ನು ಚರ್ಚೆ ವೇಳೆ ಚೀನಾ ಸೈನಿಕರ ನಡೆ ವಿರುದ್ಧ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಸೈನಿಕರ ಸಂಘರ್ಷವನ್ನು ಚೀನಾ ಸೈನಿಕರ ಪೂರ್ವನಿಯೋಜಿತ ಕೃತ್ಯ ಎಂದು ಜೈ ಶಂಕರ್ ಟೀಕಿಸಿದ್ದಾರೆ ಎನ್ನಲಾಗಿದೆ.

error: Content is protected !!