ರಾಜ್ಯಗಳ ಬಗ್ಗೆ ಪ್ರಧಾನಿ ಮೆಚ್ಚುಗೆ

18/06/2020

ಬೆಂಗಳೂರು ಜೂ.18 : ಕೋವಿಡ್ 19 ನಿಯಂತ್ರಣ ಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಜತೆಗೆ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ, ರಾಜ್ಯಗಳು ಇನ್ನು ಅನ್ ಲಾಕ್ ನತ್ತ ಹೆಜ್ಜೆಯಿಡಬೇಕು. ನಿರ್ಬಂಧ ಕಡಿಮೆಯಾಗಿ, ಚಟುವಟಿಕೆಗಳು ಚುರುಕಾಗಲಿ ಎಂದು ಸಲಹೆ ನೀಡಿದರು.
ಆತ್ಮನಿರ್ಭರ ಪ್ಯಾಕೇಜ್ ಆರ್ಥಿಕ ಚಟುವಟಿಕೆ ಚುರುಕುಗಾಗಲು ನೆರವಾಗಲಿದ್ದು, ಈ ಪ್ಯಾಕೇಜ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ ಎಂದು ನರೇಂದ್ರ ಮೋದಿ ಹೇಳಿದರು. ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾಗವಹಿಸಿ, ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.