ಜೂ. 19 ರಂದು ಕೊಡಗು ಜಿಲ್ಲಾ ಕಾಂಗ್ರೆಸ್‌ನಿಂದ ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಣೆ ಹಾಗೂ ಕೊರೋನಾ ವಾರಿಯರ್ಸ್‌ಗೆ ಸನ್ಮಾನ

18/06/2020

ಮಡಿಕೇರಿ ಜೂ.18 : ಭಾರತ-ಚೀನಾ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ಜೂ. 19 ರಂದು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಅರ್ಪಣೆ ಹಾಗೂ ಕೊರೋನಾ ವಾರಿಯರ್ಸ್‍ಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಬೆಳಗ್ಗೆ 10.15ಕ್ಕೆ ಮಡಿಕೇರಿ ನಗರಸಭೆ ಬಳಿಯಿರುವ ಯುದ್ಧ ಸ್ಮಾರಕದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಗುವುದು.
ನಂತರ 11.15ಕ್ಕೆ ನಗರದ ಕೆಳಗಿನ ಕೊಡವ ಸಮಾಜದ ಬಳಿಯಿರುವ ಡಿಹೆಚ್‍ಓ ಕಚೇರಿ ಆವರಣದಲ್ಲಿ ಕಾಂಗ್ರೆಸ್ ರಾಷ್ಟ್ರನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಕೊಡಗಿನ ಕೊರೋನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.