ಮಾಸ್ಕ್ ದಿನ ಅಂಗವಾಗಿ ಕುಶಾಲನಗರದಲ್ಲಿ ಜಾಗೃತಿ ಪಾದಯಾತ್ರೆ

18/06/2020

ಕುಶಾಲನಗರ ಜೂ. 18 : ಮಾಸ್ಕ್ ದಿನ ಅಂಗವಾಗಿ ಕುಶಾಲನಗರದ ವಿವಿಧ ಸರಕಾರಿ ಕಛೇರಿ ಅಧಿಕಾರಿ ಸಿಬ್ಬಂದಿಗಳು ಪಟ್ಟಣದಲ್ಲಿ ಮೆರವಣಿಗೆ ತೆರಳಿ ಜನರಿಗೆ ಮಾಸ್ಕ್ ಬಳಸುವ ಬಗ್ಗೆ ಅರಿವು, ಜಾಗೃತಿ ಮೂಡಿಸಿದರು.
ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ಆಶ್ರಯದಲ್ಲಿ
ಆರೋಗ್ಯ ಕೇಂದ್ರದ ಆವರಣದಿಂದ ಆರಂಭಗೊಂಡ ಜಾಥಾ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಜಾಥಾ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.
ಡಿವೈಎಸ್ಪಿ ಎಚ್.ಎಂ.ಶೈಲೇಂದ್ರ ಜಾಥಾಗೆ ಚಾಲನೆ ನೀಡಿದರು.
ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ವೃತ್ತ ನಿರೀಕ್ಷಕ ಎಂ.ಮಹೇಶ್, ಕುಶಾಲನಗರ ಠಾಣಾಧಿಕಾರಿ ವೆಂಕಟರಮಣ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಧುಸೂದನ್, ಡಾ. ಪ್ರತಿಭಾ ಸಿಬ್ಬಂದಿಗಳು ಇದ್ದರು.
ಕುಶಾಲನಗರ ಪಟ್ಟಣ ಪಂಚಾಯ್ತಿ ವತಿಯಿಂದ ಮಾಸ್ಕ್ ದಿನ ಅಂಗವಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು, ಪಪಂ ನೌಕರರು, ಸಿಬ್ಬಂದಿಗಳು ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿ ಮಾಸ್ಕ್ ಮತ್ತು ಸಾನಿಟೈಸರ್ ಬಳಸುವ ಮೂಲಕ ತಮ್ಮನ್ನು ಹಾಗೂ ಇತರರನ್ನು ಕೊರೊನದಿಂದ ಸಂರಕ್ಷಣೆ ಪಡೆಯುವ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.
ಕುಶಾಲನಗರ ಪಪಂ ಮುಖ್ಯಾಧಿಕಾರಿ ಸುಜಯ್‍ಕುಮಾರ್, ಸದಸ್ಯರಾದ ಡಿ.ಕೆ.ತಿಮ್ಮಪ್ಪ, ಅಮೃತ್‍ರಾಜ್, ಜಯಲಕ್ಷ್ಮಿ ನಂಜುಂಡಸ್ವಾಮಿ, ಸುರೇಶ್, ಆರೋಗ್ಯಾಧಿಕಾರಿ ಉದಯಕುಮಾರ್ ಮತ್ತು ಸಿಬ್ಬಂದಿಗಳು ಇದ್ದರು.
ಕುಶಾಲನಗರ ಸಮೀಪದ ಕೊಪ್ಪ ಗ್ರಾಮಪಂಚಾಯ್ತಿ, ಆರೋಗ್ಯ ಮತ್ತು ಕಂದಾಯ ಇಲಾಖೆ ವತಿಯಿಂದ ಮುಖ್ಯರಸ್ತೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಮೆರವಣಿಗೆ ತೆರಳಿ ಕೊರೊನದಿಂದ ರಕ್ಷಣೆ ಪಡೆಯುವ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.