ಜೂ.22 ರಂದು ಶನಿವಾರಸಂತೆ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಉದ್ಘಾಟನೆ

19/06/2020

ಮಡಿಕೇರಿ ಜೂ.19 : ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನದ ಉದ್ಘಾಟನಾ ಸಮಾರಂಭವು ಜೂನ್, 22 ರಂದು ಮಧ್ಯಾಹ್ನ 2 ಗಂಟೆಗೆ ಶನಿವಾರಸಂತೆ ಐ.ಬಿ.ರಸ್ತೆಯ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಶನಿವಾರಸಂತೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಚ್.ಆರ್.ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಉಚ್ಚ ನ್ಯಾಯಲಯದ ಹಿರಿಯ ವಕೀಲರಾದ ಚಂದ್ರಮೌಳಿ, ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷರಾದ ಎಂ.ಎ.ಮಹಮ್ಮದ್ ಗೌಸ್, ಮಾಜಿ ಸಚಿವರಾದ ಬಿ.ಎ.ಜೀವಿಜಯ, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರೋಜಮ್ಮ, ಸದಸ್ಯರಾದ ಪುಟ್ಟರಾಜು, ಸೋಮವಾರಪೇಟೆ ತಾ.ಪಂ. ಸದಸ್ಯರಾದ ಅನಂತ್ ಕುಮಾರ್, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷರಾದ ಸಿ.ಜೆ.ಗಿರೀಶ್, ಬೆಂಗಳೂರು ಗ್ರಾಮಾಂತರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಂಡಿಬೆಲೆ ರಾಜಣ್ಣ, ಕೊಡಗು ಜಿಲ್ಲೆ ಪತ್ರಕರ್ತರದ ಸಂಘದ ಅಧ್ಯಕ್ಷರಾದ ಸವಿತ ರೈ, ಭಾರತೀಯ ಪತ್ರಕರ್ತರ ಒಕ್ಕೂಟದ ಸದಸ್ಯರಾದ ಎಸ್.ಎ.ಮುರುಳೀಧರ್, ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ಸದಸ್ಯರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲೋಕೇಶ್ ಸಾಗರ್, ಸೋಮವಾರಪೇಟೆ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ಎಸ್.ಮಹೇಶ್, ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಚಂಗಪ್ಪ, ಶನಿವಾರಸಂತೆ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಎಸ್.ಎನ್.ರಘು ಇತರರು ಪಾಲ್ಗೊಳ್ಳಲಿದ್ದಾರೆ.