ಮಂಗಳವಾರದ ವರೆಗೆ ಭಾರೀ ಮಳೆ

June 20, 2020

ಬೆಂಗಳೂರು ಜೂ.20 : ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಮಂಗಳವಾರದ ವರೆಗೆ ಭಾರೀ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೆ 23ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಐದು ದಿನಗಳಲ್ಲೂ ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಿರುಗಾಳಿ ಸಮೇತ ಮಳೆ ಮುನ್ಸೂಚನೆ ನೀಡಿದ್ದು, ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮೂಳೂರಿನಲ್ಲಿ ಭಾರೀ ಗಾತ್ರದ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸುತ್ತಿದ್ದು, ಕಡಲ ಕೊರೆತದ ಆತಂಕ ಶುರುವಾಗಿದೆ.
ಉಡುಪಿ ಜಿಲ್ಲೆ, ಮಡಿಕೇರಿ, ಕಾರವಾರ, ಮಂಗಳೂರು, ಚಿಕ್ಕಮಗಳೂರು, ಕಲಬುರಗಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮಲೆನಾಡಿನಲ್ಲಿ ಸತತ ಮಳೆಯಿಂದ ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಯ ಭರ್ತಿಯಾಗಿದೆ.

error: Content is protected !!