ಜೂ.24 ರಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೊಡಗು ಭೇಟಿ

20/06/2020

ಮಡಿಕೇರಿ ಜೂ.20 : ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಜೂ.24 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಜರಾಯಿ ಮತ್ತು ಮೀನುಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.