ಕೊಡಗಿನ ಉದ್ಯಾನವನಗಳನ್ನು ತೆರೆಯಲು ಷರತ್ತು ಬದ್ಧ ಅನುಮತಿ

20/06/2020

ಮಡಿಕೇರಿ ಜೂ.20 : ಜಿಲ್ಲೆಗೆ ಅನ್ವಯಿಸುವಂತೆ ಕಂಟೈನ್‍ಮೆಂಟ್ ವಲಯಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸರ್ಕಾರಿ, ಪುರಸಭೆ ಉದ್ಯಾನವನಗಳನ್ನು ಮಾತ್ರ ಬೆಳಗ್ಗೆ 6 ರಿಂದ 8 ಗಂಟೆಯವರೆಗೆ ಮತ್ತು ಸಂಜೆ 5 ರಿಂದ 7 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.
ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಂಬಂಧ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಸರ್ಕಾರಿ, ಪುರಸಭೆ ಉದ್ಯಾನವನದಲ್ಲಿ ಕಡ್ಡಾಯವಾಗಿ ಪಾಲಿಸುವ ಬಗ್ಗೆ ಸಂಬಂಧಪಟ್ಟ ನಗರ ಸಭೆ, ಪಟ್ಟಣ ಪಂಚಾಯತ್ ಗಳ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.