ಸುಂಟಿಕೊಪ್ಪ ಶಾಂತಗಿರಿಯಲ್ಲಿ ಕಾರುಗಳ ನಡುವೆ ಡಿಕ್ಕಿ : ಚಾಲಕನ ಸ್ಥಿತಿ ಗಂಭೀರ

June 21, 2020

ಮಡಿಕೇರಿ ಜೂ.21 : ರಾಷ್ಟ್ರೀಯ ಹೆದ್ದಾರಿ ಸುಂಟಿಕೊಪ್ಪ ಶಾಂತಗಿರಿ ಬಳಿಯಲ್ಲಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕುಶಾಲನಗರದಿಂದ ಸುಂಟಿಕೊಪ್ಪ ಕಡೆಗೆ ನ್ಯಾನೋ ಕಾರಿನಲ್ಲಿ ಆಗಮಿಸುತ್ತಿದ್ದ ಸಂದರ್ಭ ಸುಂಟಿಕೊಪ್ಪ ಕಡೆಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಫಿಗೋ ಕಾರಿಗೆ ಡಿಕ್ಕಿ ಹೊಡೆದಿದ್ದು ನಿಯಂತ್ರಣ ತಪ್ಪಿದ ನ್ಯಾನೋ ಕಾರು ಎದುರಿನಿಂದ ಬರುತ್ತಿದ್ದ ಇನ್ನೋವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ನ್ಯಾನೋ ಕಾರನ್ನು ಚಲಾಯಿಸುತ್ತಿದ್ದ ಚಾಲಕ ಸುಂಟಿಕೊಪ್ಪ ಮಧುರಮ್ಮ ಬಡಾವಣೆಯ ನಿವಾಸಿ ಎ.ಎಂ.ರಘು ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!