ಕುಶಾಲನಗರ ನಗರ ಕಾಂಗ್ರೆಸ್ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

21/06/2020

ಮಡಿಕೇರಿ ಜೂ.21 : ಕುಶಾಲನಗರ ನಗರ ಕಾಂಗ್ರೆಸ್ ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಶರೀಫ್ ಇಬ್ರಾಹಿಂ, ಉಪಾಧ್ಯಕ್ಷರಾಗಿ ಪ್ರಾರ್ಥನ್ ಚಿಟ್ಟಿಯಪ್ಪ ಹಾಗೂ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ದಂಡಿನ ಪೇಟೆ ಅಜರುದ್ದೀನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತ್ ಕುಮಾರ್ ಅವರು ತಿಳಿಸಿದ್ದಾರೆ.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಬ್ಲಾಕ್ ಅಧ್ಯಕ್ಷರು ಘೋಷಿಸಿದರು.
ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರು ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಬಲಗೊಳ್ಳುತ್ತಿದ್ದು, ಕೊಡಗು ಜಿಲ್ಲೆಯಲ್ಲೂ ಕಾರ್ಯಕರ್ತರು ಪಕ್ಷದ ಪರ ಹೆಚ್ಚು ಹುಮ್ಮಸ್ಸಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ನೂತನ ಪದಾಧಿಕಾರಿಗಳ ಮೂಲಕ ಪಕ್ಷ ಮತ್ತಷ್ಟು ಸಂಘನೆಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಕೆಪಿಸಿಸಿ ಸಂಯೋಜಕ ಹಾಗೂ ಕುಶಾಲನಗರ ಬ್ಲಾಕ್ ಉಸ್ತುವಾರಿ ಪ್ರದೀಪ್ ರೈ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಎಡ್ವಿನ್, ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ರವಿ ಅಜ್ಜಳ್ಳಿ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ, ಯುವ ಪ್ರಧಾನ ಕಾರ್ಯದರ್ಶಿ ಕೆ.ಎನ್.ಹೂವಯ್ಯ, ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ಜನಾರ್ಧನ್, ಕುಶಾಲನಗರ ಬ್ಲಾಕ್ ಯುವ ಅಧ್ಯಕ್ಷ ದೇವಪ್ಪ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಉಪಾಧ್ಯಕ್ಷ ಮೈಸಿ ಕತ್ತಣಿರಾ, ಪ್ರಮುಖರಾದ ತೀರ್ಥ, ಗ್ರಾ.ಪಂ ಮಾಜಿ ಅಧ್ಯಕ್ಷ ವಿ.ಜೆ.ಹರೀಶ್ ಗೋಪಾಲ್, ಎಲ್ಲಾ ವಲಯ ಅಧ್ಯಕ್ಷರು, ಪದಾಧಿಕಾರಿಗಳು, ಸಾಮಾಜಿಕ ಜಾಲತಾಣ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು.
ಇದೇ ಸಂದರ್ಭ ನೂತನ ಪದಾಧಿಕಾರಿಗಳಿಗೆ ಕಾಂಗ್ರೆಸ್ ಧ್ವಜವನ್ನು ನೀಡಿ ಅಧಿಕಾರವನ್ನು ಹಸ್ತಾಂತರಿಸಲಾಯಿತು.