ಬೈಕ್ ಸ್ಟಂಟ್ : ಮೂವರ ಸಾವು

22/06/2020

ಬೆಂಗಳೂರು ಜೂ.22 : ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ಯಲಹಂಕ ಸಮೀಪ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.
ಮೃತರು ಬೆಂಗಳೂರಿನ ಗೋವಿಂದಪುರ ಪ್ರದೇಶದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ರಸ್ತೆ ಖಾಲಿಯಿದೆ ಎಂದು ಬೈಕ್ ನಲ್ಲಿ ಹೊರಟ ಯುವಕರು ಹುರುಪಿನಿಂದ ಸ್ಟಂಟ್ ಮಾಡಿದ್ದಾರೆ. ಈ ವೇಳೆ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾರೆ.
ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.