ಕೊಡಗಿನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು ದೃಢ : ಸೋಂಕಿತರ ಸಂಖ್ಯೆ 5 ಕ್ಕೆ ಏರಿಕೆ
22/06/2020

ಮಡಿಕೇರಿ ಜೂ.22 : ಕೊಡಗು ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ದೃಢ ಪಟ್ಟಿದ್ದು, ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಒಬ್ಬರಿಗೆ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಸೋಂಕು ಇರುವುದು ಖಚಿತವಾಗಿದೆ.
ಮಡಿಕೇರಿಯಲ್ಲಿರುವ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 53 ಮಂದಿ ದಾಖಲಾಗಿದ್ದು, 280 ರೋಗಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಪರೀಕ್ಷೆಯ ನಂತರ ಇಬ್ಬರಲ್ಲಿ ಸೋಂಕು ಇರುವುದಾಗಿ ತಿಳಿದು ಬಂದಿದೆ. ಪ್ರಸ್ತುತ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಐದು ಆಗಿದ್ದು, ಇವರಲ್ಲಿ ಆರಂಭದಲ್ಲಿ ಪತ್ತೆಯಾಗಿದ್ದ ಪ್ರಕರಣದ ವ್ಯಕ್ತಿ ಗುಣಮುಖರಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ.
ಇತರ ದೇಶದ 7 ಮತ್ತು ಇತರ ರಾಜ್ಯದ 458 ಸೇರಿ ಒಟ್ಟು 465 ಮಂದಿಯನ್ನು ಗೃಹ ಸಂಪರ್ಕ ತಡೆಯಲ್ಲಿಡಲಾಗಿದೆ.