ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ : ಶಿಕ್ಷಣಾಧಿಕಾರಿ ಪಿ.ಎಸ್.ಮಚ್ಚಾಡೊ

June 22, 2020

ಮಡಿಕೇರಿ ಜೂ.22 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜೂನ್, 25 ರಿಂದ ಜುಲೈ, 03 ರವರೆಗೆ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಡಿಕೇರಿ ಮತ್ತು ವಿರಾಜಪೇಟೆ ತಲಾ 8 ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 11 ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 7,149 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3,562 ಬಾಲಕರು ಮತ್ತು ೩,೫೮೭ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.
ಒಂದು ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತಲಾ 2ಮಾಸ್ಕ್ ಅನ್ನು ಒದಗಿಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ವಿವರಿಸಿದರು.


     

error: Content is protected !!