ಆಲೂರು ಸಿದ್ದಾಪುರ ದೊಡ್ಡಳ್ಳಿ ಗ್ರಾಮದ ಮಹಿಳೆಗೆ ಕೋವಿಡ್ 19

22/06/2020

ಮಡಿಕೇರಿ ಜೂ.22 : ಸೋಮವಾರಪೇಟೆ ತಾಲ್ಲೂಕು ಆಲೂರು ಸಿದ್ದಾಪುರ ಬಳಿಯ ದೊಡ್ಡಳ್ಳಿ ಗ್ರಾಮದ 26 ವರ್ಷದ ಮಹಿಳೆಯೊಬ್ಬರಿಗೂ ಸೋಂಕು ತಗುಲಿದೆ. ಮುಂಬೈನಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಕಳೆದ ತಿಂಗಳು ಬಂದಿದ್ದ ಮಹಿಳೆಯು 14 ದಿನಗಳ ಗೃಹ ಸಂಪರ್ಕ ತಡೆಯಲ್ಲಿದ್ದು, ಅನಂತರ ಇತ್ತೀಚೆಗಷ್ಟೇ ದೊಡ್ಡಳ್ಳಿ ಗ್ರಾಮದ ಗಂಡನ ಮನೆಗೆ ಬಂದಿದ್ದರು. ಆಶಾ ಕಾರ್ಯಕರ್ತೆಯರು ಇವರ ಮನೆಗೆ ತೆರಳಿ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ ಸಂದರ್ಭ ಸೋಂಕು ಇರುವುದು ಪತ್ತೆಯಾಗಿದೆ ಎಂದೂ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಸದ್ಯಕ್ಕೆ ದೊಡ್ಡಳ್ಳಿ ಗ್ರಾಮವನ್ನೂ ಕಂಟೈನ್ ಮೆಂಟ್ ಮಾಡಲಾಗಿದೆ. 137 ಮನೆ, 37 ಕುಟುಂಬದ 137 ಕುಟುಂಬಸ್ಥರನ್ನು ಕಂಟೈನ್ ಮೆಂಟ್ ಜೋನ್ ನಲ್ಲಿರಿಸಲಾಗಿದೆ ಎಂದೂ ಅವರು ಹೇಳಿದರು.