ಕೊಡಗಿನಲ್ಲಿ ಇಬ್ಬರು ಕೊರೋನಾ ಸೋಂಕಿತರು ಗುಣಮುಖ

22/06/2020

ಮಡಿಕೇರಿ ಜೂ.22 : ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಈ ಹಿಂದೆ ದಾಖಲಾಗಿದ್ದ ಇಬ್ಬರು ಸೋಂಕಿತ ವ್ಯಕ್ತಿಗಳು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 6 ಪ್ರಕರಣ ವರದಿಯಾಗಿದ್ದು ಮೂವರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಹೊಸದ್ದಾಗಿ ಪ್ರಾರಂಭಿಸಲಾದ ಪ್ರಯೋಗಾಲಯದಲ್ಲಿ ದಿನಕ್ಕೆ 280 ರಷ್ಟು ಗಂಟಲ ದ್ರವ ಪರೀಕ್ಷೆ ನಡೆಸಲಾಗುತ್ತಿದ್ದು, ದಿನದ 24 ಗಂಟೆಯೂ ಈ ಪ್ರಯೋಗಾಲಯ ಕಾರ್ಯನಿರ್ವಹಿಸುತ್ತಿದೆ ಎಂದೂ ಜಿಲ್ಲಾಧಿಕಾರಿ ತಿಳಿಸಿದರು.
ಕೊಡಗಿನಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಿಷೇಧಿಸುವಂತೆ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಮತ್ತು ಡಾ.ಮಹೇಶ್ ಸುದ್ದಿಗೋಷ್ಟಿಯಲ್ಲಿದ್ದರು.