ಜಗನ್ನಾಥ ರಥಯಾತ್ರೆಗೆ ಅನುಮತಿ

June 23, 2020

ನವದೆಹಲಿ ಜೂ.22 : ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ರಥಯಾತ್ರೆ “ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ.
ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ ನೇರ ಪ್ರಸಾರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.
ಜೂನ್ 18 ರಂದು ನೀಡಿದ್ದ ತನ್ನ ತೀರ್ಪನ್ನು ಬದಲಾಯಿಸಿ ಈ ಸಂಬಂಧ ಸುಪ್ರೀಂ ಕೋರ್ಟ್ ನ್ಯಾಯಪೀಠ ಆದೇಶಿಸಿದೆ.

error: Content is protected !!