ಸೇನೆ ಹಿಂಪಡೆಯಲು ನಿರ್ಧಾರ
24/06/2020

ನವದೆಹಲಿ ಜೂ.24 : ಗಲ್ವಾನ್ ಕಣಿವೆ ಸಂಘರ್ಷದ ಬಳಿಕ ಲಡಾಖ್ ಗಡಿಯಲ್ಲಿ ಉಂಟಾಗಿದ್ದ ಗಂಭೀರ ಪರಿಸ್ಥಿತಿಯನ್ನು ತಿಳಿಗೊಳಿಸುವ ಭಾರತ ಮತ್ತು ಚೀನಾ ಸೇನಾ ಮುಖ್ಯಸ್ಥರ ಪ್ರಯತ್ನಕ್ಕೆ ಮಹತ್ವದ ಜಯ ಲಭಿಸಿದ್ದು, ಎರಡೂ ಸೇನಾ ಮುಖ್ಯಸ್ಥರು ತಮ್ಮ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಲು ನಿರ್ಧರಿಸಿದ್ದಾರೆ.
ಲಡಾಖ್‍ನ ಪೂರ್ವ ಭಾಗದ ನಾಲ್ಕು ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಚೀನಾ ಮತ್ತು ಭಾರತದ ಸೈನಿಕರು ಕೂಡಲೇ ಬಿಕ್ಕಟ್ಟಿನ ಪ್ರದೇಶವನ್ನು ಬಿಟ್ಟು ಹಿಂದಕ್ಕೆ ಸರಿಯುವ ಕುರಿತು ಮಹತ್ವದ ಒಮ್ಮತಗ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಸತತ ಒಂದು ವಾರದಿಂದ ನಡೆಯುತ್ತಿರುವ ಸೇನಾ ಮುಖ್ಯಸ್ಥರ ಸಭೆಯಲ್ಲಿ ಇಂದು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಎರಡೂ ದೇಶಗಳ ಸೇನಾ ಮುಖ್ಯಸ್ಥರು ಸೇನೆಯನ್ನು ಹಿಂತೆಗೆಯಬೇಕು ಎಂಬ ವಿಷಯವಾಗಿ ಒಮ್ಮತಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.
