ಜು.31ರ ವರೆಗೆ ಶಾಲಾ ಕಾಲೇಜ್ ಬಂದ್

June 24, 2020

ಕೋಲ್ಕತಾ ಜೂ.24 : ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಶಾಲಾ, ಕಾಲೇಜ್ ಗಳನ್ನು ಜು.31ರ ವರೆಗೆ ಬಂದ್ ಮಾಡಲು ನಿರ್ಧರಿಸಿದೆ.
ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜ್ ಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲಾಗುವುದು ಎಂದು ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥಾ ಚಟರ್ಜಿ ಅವರು ಹೇಳಿದ್ದಾರೆ.
ರಾಜ್ಯಾದ್ಯಂತ ಎಲ್ಲಾ ಸರ್ಕಾರ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಕಾಲೇಜ್ ಗಳು ಹಾಗೂ ವಿಶ್ವವಿದ್ಯಾಲಯಗಳ ಎಲ್ಲಾ ತರಗತಿಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ವೈರಸ್ 14 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 569ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು ಮತ್ತೆ 413 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 14,358ಕ್ಕೆ ಏರಿಕೆಯಾಗಿದೆ.

error: Content is protected !!