ಕೊರೋನಾಗೆ ಪತಂಜಲಿ ಔಷಧಿ ಸಿದ್ಧ

June 24, 2020

ನವದೆಹಲಿ ಜೂ.24 : ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಯೋಗ ಗುರು ಬಾಬಾ ರಾಮ್ ದೇವ್ ನೇತೃತ್ವದ ಪತಂಜಲಿ ಯೋಗ ಪೀಠ ಇಂದು ಔಷಧಿ ಬಿಡುಗಡೆ ಮಾಡಿದೆ.
ಕೊರೋನಾ ವೈರಸ್ ಚಿಕಿತ್ಸೆಗೆ ಇಂದು ಬಾಬಾ ರಾಮದೇವ್ ಅವರ ಪತಂಜಲಿ ಯೋಗಪೀಠ ಇಂದು ಔಷಧಿ ಬಿಡುಗಡೆಗೊಳಿಸಿದೆ. ಪತಂಜಲಿ ಬಿಡುಗಡೆಗೊಳಸಿರುವ ಔಷಧಿಗೆ ಕೊರೋನಿಲ್ ಎಂಬ ಹೆಸರು ನೀಡಲಾಗಿದ್ದು, ಕೊರೋನಾ ವೈರಸ್ ಚಿಕಿತ್ಸೆಗೆ ಇದು ಪ್ರಭಾವಶಾಲಿಯಾಗಿದೆ ಎಂದು ಸಂಸ್ಥೆ ಹೇಳಿದೆ.
ಈ ಕುರಿತಂತೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್ ದೇವ್ ಅವರು, ಪತಂಜಲಿ ರಿಸರ್ಚ್ ಇನ್ಸ್ಟಿಟ್ಯೂಟ್ (PಖI) ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಓIಒS), ಜೈಪುರ್ ಸಂಶೋಧಕರು ಜಂಟಿಯಾಗಿ ಈ ಔಷಧಿಯನ್ನು ಸಿದ್ಧಪಡಿಸಿದ್ದಾರೆ. ಔಷಧಿಯನ್ನು ತಯಾರಿಸುವ ಕೆಲಸ ಪತಂಜಲಿ ಹಾಗೂ ದಿವ್ಯ ಫಾರ್ಮಸಿ ಜಂಟಿಯಾಗಿ ನಡೆಸಲಿವೆ ಎಂದು ಹೇಳಿದರು.
ಕೊವಿಡ್ 19 ರೋಗದ ವಿರುದ್ಧ ಹೋರಾಡಲು ಮೊದಲ ಭಾರಿಗೆ ಆಯುರ್ವೇದದಲ್ಲಿ ಔಷಧಿ ಕಂಡುಹಿಡಿದಿದ್ದೇವೆ. ಈ ಔಷಧಿಗಳನ್ನು ಈಗಾಗಲೇ ಕ್ಲಿನಿಕಲ್ ಟ್ರಯಲ್ ಮಾಡಲಾಗಿದ್ದು, ಈ ವೇಳೆ ಚಿಕಿತ್ಸೆ ನಡೆಸಿದ ಒಟ್ಟಾರೆ ಸೋಂಕಿತರ ಪೈಕಿ ಶೇ.69 ಮಂದಿ ಸೋಂಕಿತರು ಮೂರೇ ದಿನದಲ್ಲಿ ಗುಣಮುಖರಾಗಿದ್ದು, 7 ದಿನದಲ್ಲಿ ಶೇ.100ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ. ಈ ಔಷಧಿ ಕೊರೋನಾ ವೈರಸ್ ಸಾವಿನ ಪ್ರಮಾಣವನ್ನು ಶೂನ್ಯಗೊಳಿಸಲಿದೆ ಎಂದು ಬಾಬಾ ರಾಮ್ ದೇವ್ ಹೇಳಿದ್ದಾರೆ.

error: Content is protected !!