ಕೊರೋನಾ ತಡೆಗೆ ಸ್ವತ: ಪೊಲೀಸರೇ ರಸ್ತೆಗಿಳಿದರು

24/06/2020

ಮಡಿಕೇರಿ ಜೂ.24 : ಕೊರೋನಾ ಸೋಂಕು ದೇಶವ್ಯಾಪಿ ವ್ಯಾಪಿಸುತ್ತಿರುವ ಬೆನ್ನಲ್ಲೇ ಹಸಿರ ವಲಯದಲ್ಲಿದ್ದ ಕೊಡಗು ಜಿಲ್ಲೆ ಈಗ ಸೋಂಕಿತರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಕಳೆದ ಎರಡು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿರುವುರಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಸ್ವತಃ ಪೊಲೀಸರೇ ರಸ್ತೆಗಿಳಿದಿದ್ದು, ಮಾಸ್ಕ್ ಧರಿಸುವುದು ಕಡ್ಡಾಯವೆಂದು ಬೀದಿ ಬೀದಿಗಳಲ್ಲಿ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.