ಕಾಂಗ್ರೆಸ್ ನೂತನ ಅಧ್ಯಕ್ಷ ಷರೀಫ್ ಇಬ್ರಾಹಿಂಗೆ ಅಧಿಕಾರ

June 25, 2020

ಮಡಿಕೇರಿ ಜೂ.25 : ಕುಶಾಲನಗರ ನಗರ ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಷರೀಫ್ ಇಬ್ರಾಹಿಂ ಅವರಿಗೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಅಧ್ಯಕ್ಷ ಅನಂತ ಕುಮಾರ್ ಅವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.
ಈ ಸಂದರ್ಭ ಮಾತನಾಡಿದ ಷರೀಫ್ ಇಬ್ರಾಹಿಂ ಅವರು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು.
ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ಪಕ್ಷದ ಜಿಲ್ಲಾ ವಕ್ತಾರ ಟಿ.ಈ.ಸುರೇಶ್, ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ಜೆ.ಎಲ್.ಜನಾರ್ಧನ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ದೇವಪ್ಪ ಹಾಗೂ ಕಾರ್ಯಕರ್ತರು ಹಾಜರಿದ್ದರು.

error: Content is protected !!