ವಿಧಾನಸೌಧಕ್ಕೆ ಸಾರ್ವಜನಿಕ ಪ್ರವೇಶವಿಲ್ಲ

25/06/2020

ಬೆಂಗಳೂರು ಜೂ.24 : ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹ ಕಟ್ಟಡಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಸಚಿವಾಲಯದ ಕಟ್ಟಡಗಳಲ್ಲಿ ನೋವೆಲ್ ಕೊರೋನಾ ವೈರಸ್ (ಕೋವಿಡ್ 19) ಸೋಂಕು ಹರಡುತ್ತಿರುವುದರಿಂದ ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ. ಹೀಗಾಗಿ ಸಚಿವಾಲಯದ ಅಧಿಕಾರಿ ಸಿಬ್ಬಂದಿ ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಚಿವರು ಅಧಿಕಾರಿಗಳನ್ನು ಭೇಟಿ ಮಾಡಲು ಸಂದರ್ಶಿಸಲು ನಿರ್ದಿಷ್ಟ ಉದ್ದೇಶವನ್ನು ಹೊಂದಿರುವ ಸಾರ್ವಜನಿಕರನ್ನು ಮಾತ್ರ ಪರಿಶೀಲಿಸಿ ಮಧ್ಯಾಹ್ನ 3.30 ರ ನಂತರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.