ಮಡಿಕೇರಿಯಲ್ಲಿ 6 ದಿನ ಎಲ್ಲಾ ಕ್ಷೌರದ ಅಂಗಡಿಗಳು ಬಂದ್

25/06/2020

ಮಡಿಕೇರಿ ಜೂ. 25 : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೂ. 25 ರಿಂದ ಜೂ. 30ರವರೆಗೆ ಮಡಿಕೇರಿ ತಾಲ್ಲೂಕಿನ ಎಲ್ಲಾ ಕ್ಷೌರದ ಅಂಗಡಿಗಳನ್ನು ಬಂದ್ ಮಾಡಲು ಮಡಿಕೇರಿ ತಾಲ್ಲೂಕು ಸವಿತಾ ಸಮಾಜ ತೀರ್ಮಾನಿಸಿದೆ.
ಸಮಾಜದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಧು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಜನರ ಆರೋಗ್ಯದ ದೃಷ್ಟಿಯಿಂದ ಹಾಗೂ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಸ್ವಯಂ ಪ್ರೇರಿತವಾಗಿ ಮಡಿಕೇರಿ ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಸಲೂನ್ ಶಾಪ್ ಗಳನ್ನು ಬಂದ್ ಮಾಡಲು ಸದಸ್ಯರು ಒಮ್ಮತದ ತೀರ್ಮಾನ ಕೈಗೊಂಡಿದ್ದು, ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದೆ.