ಕೊಡಗಿನಲ್ಲಿ ಕೊರೋನಾ : ಮೂವರು ಗುಣಮುಖ

25/06/2020

ಮಡಿಕೇರಿ ಜೂ.25 : ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 26 ಕ್ಕೆ ಏರಿಕೆಯಾಗಿದ್ದು, ಮೂವರು ಗುಣಮುಖರಾಗಿದ್ದಾರೆ. 23 ಮಂದಿಯನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ 12 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.