ಕುಶಾಲನಗರ ಸುತ್ತಮುತ್ತ ತೀವ್ರ ನಿಗಾ

25/06/2020

ಮಡಿಕೇರಿ ಜೂ.25 : ಜಿಲ್ಲೆಯಲ್ಲಿ ಕೊರೋನಾ ಸೋಂಕು ವ್ಯಾಪಿಸುತ್ತಿದ್ದು, ಕುಶಾಲನಗರದಲ್ಲಿ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ. ಸ್ಥಳೀಯ ಮೆಡಿಕಲ್ ಶಾಪ್ ಮಾಲೀಕನ ಮಗನಿಗೂ ಸೋಂಕು ತಗುಲಿದ್ದು, ರಥಬೀದಿಯನ್ನು ಕಂಟೈನ್ ಮೆಂಟ್ ಜೋನ್ ಮಾಡಲಾಗಿದೆ. ವಾಹನ ಮತ್ತು ಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ತಹಶೀಲ್ದಾರ್, ಆರೋಗ್ಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಕೆಲವು ಬಡಾವಣೆಗಳಲ್ಲಿ ವ್ಯಾಪಾರ ಸ್ಥಗಿತಗೊಂಡಿದೆ.