ಕೊವಿಡ್ ಆಸ್ಪತ್ರೆಯಲ್ಲಿ 250 ಹಾಸಿಗೆಗಳ ವ್ಯವಸ್ಥೆ

25/06/2020

ಮಡಿಕೇರಿ ಜೂ.25 : ವೈದ್ಯರ ಕೊರತೆಯಿಲ್ಲ, ಬ್ಯಾಕಪ್ ತಂಡವನ್ನು ಇದೀಗ ಸಿದ್ದಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆಯ ಕೊರತೆಯೂ ಇಲ್ಲ. ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೊವಿಡ್ ಆಸ್ಪತ್ರೆಯಲ್ಲಿ 250 ಹಾಸಿಗೆಗಳ ವ್ಯವಸ್ಥೆಯಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ವಿರಾಜಪೇಟೆ, ಸೋಮವಾರಪೇಟೆಗಳಲ್ಲಿಯೂ ಆಸ್ಪತ್ರೆಯಲ್ಲಿ ಅಗತ್ಯವಿದ್ದರೆ ಹೆಚ್ಚಿನ ಹಾಸಿಗೆಗಳನ್ನು ವ್ಯವಸ್ಥೆಗೊಳಿಸಲು ಆರೋಗ್ಯ ಇಲಾಖೆ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.