6600 ಗಂಟಲ ದ್ರವ ಮಾದರಿ ಪರೀಕ್ಷೆಗೊಳಪಡಿಸಲಾಗಿದೆ

25/06/2020

ಮಡಿಕೇರಿ ಜೂ.25 : ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಗಳ ಕಾಲ ಗಂಟಲ ದ್ರವ ಮಾದರಿ ಪರೀಕ್ಷೆಯ ಪ್ರಯೋಗಾಲಯ ಕಾರ್ಯನಿರ್ವಹಿಸುತ್ತಿದ್ದು, ಅನೇಕರ ವರದಿಗಳು ಬರಲು ಬಾಕಿಯಿದೆ. ಒಂದು ದಿನದಲ್ಲಿ 380 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಈವರೆಗೂ 6600 ಗಂಟಲ ದ್ರವ ಮಾದರಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಲಾಕ್ ಡೌನ್ ಬಗ್ಗೆ ಸರ್ಕಾರವೇ ನಿರ್ಧರಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಎರಡು ವಾರಗಳ ಹಿಂದೆ ಆರಂಭಗೊಂಡಿದ್ದ ಪ್ರವಾಸೋದ್ಯಮ ಇದೀಗ ಸ್ಥಗಿತಗೊಂಡಿದೆ.