ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 30

25/06/2020

ಮಡಿಕೇರಿ ಜೂ.25 : ಕೊಡಗು ಜಿಲ್ಲೆಯಲ್ಲಿ ಗುರುವಾರ ಒಟ್ಟು ಎಂಟು ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 30 ಪಾಸಿಟಿವ್ ಪ್ರಕರಣಗಳು ವರದಿಯಾದಂತಾಗಿದ್ದು, ಈ ಪೈಕಿ ಮೂವರು ಗುಣಮುಖರಾಗಿದ್ದರೆ, 27 ಪ್ರಕರಣಗಳು ಸಕ್ರಿಯವಾಗಿವೆ.
ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ 53 ವರ್ಷ ಕಾರ್ಮಿಕ ಹಾಗೂ ಆತನ ಪತ್ನಿಯಲ್ಲಿ ಕೋವಿಡ್-19 ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿದೆ.