ಹೊರಗಿನಿಂದ ಕೊಡಗಿಗೆ ಬಂದವರಿಗೆ ಸಂಪರ್ಕ ತಡೆ ಕಡ್ಡಾಯ

25/06/2020

ಇತರೆ ದೇಶ/ರಾಜ್ಯಗಳಿಂದ ಕಳೆದ 14 ದಿನಗಳಲ್ಲಿ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವವರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಅದರಂತೆ ಇತರ ದೇಶದ 6 ಇತರ ರಾಜ್ಯದ 519 ಮಂದಿ ಸೇರಿದಂತೆ ಒಟ್ಟು 525 ಮಂದಿ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ಚೆಕ್ ಪೋಸ್ಟ್ ಗಳಲ್ಲೂ ತೀವ್ರ ನಿಗಾ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.