ಕೊಡಗು : ಗಂಟಲ ದ್ರವ ಪರೀಕ್ಷೆ : ವರದಿಯ ನಿರೀಕ್ಷೆಯಲ್ಲಿದ್ದಾರೆ 847 ಮಂದಿ
25/06/2020

ಮಡಿಕೇರಿ ಜೂ.25 : ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 6807 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 30 ಪಾಸಿಟಿವ್ ಪ್ರಕರಣಗಳಾಗಿವೆ. ಇವರಲ್ಲಿ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 5394ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 847 ಮಂದಿಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅಲ್ಲದೆ 121 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದ್ದಾರೆ.