ಶುಕ್ರವಾರದಿಂದ ಶನಿವಾರಸಂತೆಯಲ್ಲಿ ಸ್ವಯಂಪ್ರೇರಿತ ಬಂದ್

25/06/2020

ಮಡಿಕೇರಿ ಜೂ.25 : ಶನಿವಾರಸಂತೆಯಲ್ಲಿ ಶುಕ್ರವಾರದಿಂದ ಮುಂದಿನ 10 ದಿನಗಳವರೆಗೆ ಸ್ವಯಂಪ್ರೇರಿತ ಬಂದ್ ನಡೆಸಲು ಅಲ್ಲಿನ ಚೇಂಬರ್ ಆಫ್ ಕಾಮರ್ಸ್ ನಿರ್ಧರಿಸಿದೆ. ಅದರಂತೆ ಪ್ರತಿದಿನ ಬೆಳಗ್ಗೆ 7ರಿಂದ ಮಧ್ಯಾಹ್ನ 12ಗಂಟೆವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲಾಗುತ್ತದೆ. ಭಾನುವಾರ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಚೇಂಬರ್ ಪದಾಧಿಕಾರಿಗಳು ತಿಳಿಸಿದ್ದಾರೆ. ಪಟ್ಟಣದ ವಿವಿಧೆಡೆ ಆರೋಗ್ಯ ಅಧಿಕಾರಿಗಳು ಹಾಗೂ ಪೊಲೀಸರು ನಿಗಾ ವಹಿಸಿದ್ದಾರೆ.