ಕೊಡಗಿನಲ್ಲಿ ಸುಸೂತ್ರವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪ್ರಥಮ ಪರೀಕ್ಷೆ

26/06/2020

ಮಡಿಕೇರಿ ಜೂ.25 : ರಾಜ್ಯಾದ್ಯಂತ ಗುರುವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿಯೂ ಸರ್ಕಾರದ ನಿಯಮಗಳನ್ನು ಪಾಲಿಸಿ ಸುರಕ್ಷಿತ ಮತ್ತು ವ್ಯವಸ್ಥಿತ ರೀತಿಯಲ್ಲಿ ಮೊದಲ ಪರೀಕ್ಷೆಯನ್ನು ನಡೆಸಲಾಯಿತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪಿ.ಎಸ್ ಮಚ್ಚಾಡೋ ಅವರು ತಿಳಿಸಿದ್ದಾರೆ.
ಏಪ್ರಿಲ್ ಮಾಹೆಯಲ್ಲಿ ನಡೆಯ ಬೇಕಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಜೂನ್ 25 ರಿಂದ ಜುಲೈ 3 ರ ವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ರಾಜ್ಯಾದ್ಯಂತ ನಡೆಸುತ್ತಿದೆ. ಜಿಲ್ಲೆಯಲ್ಲಿಯೂ ಗುರುವಾರ ಇಂಗ್ಲೀμï ಭಾμÁ ಪರೀಕ್ಷೆಯು ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ನಡೆದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಇಂಗ್ಲೀμï ಭಾμÁ ಪರೀಕ್ಷೆಗೆ ಜಿಲ್ಲೆಯಾದ್ಯಂತ 6,749 ವಿದ್ಯಾರ್ಥಿಗಳು ನೋಂದಾವಣಿಗೊಂಡಿದ್ದು, ಈ ಪೈಕಿ 6,385 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 364 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೆÇಲೀಸ್ ಇಲಾಖೆ, ಆರೋಗ್ಯ ಇಲಾಖೆಯಿಂದ ಸುಗಮವಾಗಿ ಪರೀಕ್ಷೆ ನಡೆಯುವ ನಿಟ್ಟಿನಲ್ಲಿ ಅತ್ಯುತ್ತಮ ಸಹಕಾರ ದೊರೆತಿದ್ದು, ಮುಂದಿನ ಪರೀಕ್ಷೆಗಳ ಸಂಧರ್ಭವೂ ಸಹ ವಿದ್ಯಾರ್ಥಿಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಿ.ಎಸ್ ಮಚ್ಚಾಡೋ ಅವರು ತಿಳಿಸಿದರು.
ಮುಂಜಾನೆ 7:30 ಕ್ಕೆ ಸಿಬ್ಬಂದಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದರು. ಆರೋಗ್ಯ ಮತ್ತು ಪೆÇಲೀಸ್ ಇಲಾಖೆಯ ಸಹಕಾರದೊಂದಿಗೆ ಪ್ರತಿ ವಿದ್ಯಾರ್ಥಿಗೂ ಥರ್ಮಲ್ ಸ್ರ್ಕೀನಿಂಗ್ ನಡೆಸಿ, ಸ್ಯಾನಿಟೈಸರ್ ಒದಗಿಸಿದ ನಂತರ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಯಿತು. ಅಲ್ಲದೆ ಸಾಕಷ್ಟು ವಿದ್ಯಾರ್ಥಿಗಳೇ ಮನೆಯಿಂದಲೇ ಹ್ಯಾಂಡ್ಯ್ ಸ್ಯಾನಿಟೈಸರ್ ಮತ್ತು ಕುಡಿಯುವ ನೀರಿನ ಬಾಟಲ್‍ಗಳನ್ನು ತಂದಿದ್ದರು. ಪರೀಕ್ಷಾ ಕೊಠಡಿ ಮತ್ತು ಥರ್ಮಲ್ ಸ್ಕ್ರೀನಿಂಗ್ ಸಂದರ್ಭ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ವಿದ್ಯಾರ್ಥಿಗಳು ಗುಂಪುಗೂಡದಂತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಧ್ವನಿ ವರ್ಧಕಗಳ ಮೂಲಕ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಯಿತು. ಯಾವುದೇ ಗೊಂದಲಗಳಿಲ್ಲದೆ ಮೊದಲ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಇತರೆ ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಕಂಟೈನ್ ಮೆಂಟ್ ವಲಯದಿಂದ ಆಗಮಿಸಿದ್ದ ಜಿಲ್ಲೆಯ 39 ವಿದ್ಯಾರ್ಥಿಗಳಿಗೆ, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದೆ. ಸೋಮವಾರಪೇಟೆ ತಾಲೂಕಿನಿಂದ 28, ಮಡಿಕೇರಿ ತಾಲೂಕಿನ 10 ಮತ್ತು ವೀರಾಜಪೇಟೆಯ 1 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ.
ಇದರೊಂದಿಗೆ ಕಂಟೈನ್ ಮೆಂಟ್ ವಲಯದಿಂದ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ನ್ನು ನೀಡಲಾಗಿದೆ. ಜೊತೆಗೆ ಪರೀಕ್ಷೆಯ ನಂತರ ಪ್ರತಿ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ಡಿಡಿಪಿಐ ಮಚ್ಚಾಡೋ ಅವರು ತಿಳಿಸಿದ್ದಾರೆ.