ಪ್ರತಿಭಟನೆಗೆ ಮುಂದಾದ ಹೆಚ್.ಡಿ.ದೇವೇಗೌಡ

26/06/2020

ಬೆಂಗಳೂರು ಜೂ.26 : ತೋಟಗಾರಿಕಾ ಇಲಾಖೆ ನೋಡಿಕೊಳ್ಳುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ರಾಜಕೀಯ ದ್ವೇಷ, ವೈರತ್ವ, ಹಗೆತನ ಮತ್ತು ದುರುದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಕಿರುಕುಳ, ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಕಿರುಕುಳ ನಿಲ್ಲಿಸದೇ ಹೋದಲ್ಲಿ ಇದೇ 29 ರಂದು ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.
ನಾರಾಯಣಗೌಡ ಅವರು ಅಧಿಕಾರಿಗಳಿಗೆ ಚಿತಾವಣೆ ಮಾಡಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದವರನ್ನು ತುಳಿಯುವ ಹುನ್ನಾರದಲ್ಲಿ ತೊಡಗಿಕೊಂಡಿದ್ದಾರೆ. ಅಧಿಕಾರಿಗಳು, ಪೊಲೀಸರು ಜಿಲ್ಲಾ ಸಚಿವರ ಕೈಗೊಂಬೆಯಾಗಿ ಮತ್ತು ಅವರೊಂದಿಗೆ ಶಾಮೀಲಾಗಿದ್ದಾರೆ. ಕಾನೂನುಬಾಹಿರವಾಗಿ ನೀಡುವ ಸೂಚನೆ ಮತ್ತು ಆದೇಶದಂತೆ ವರ್ತಿಸಿ ಜಿಲ್ಲೆಯ ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿದ್ದು, ಇದನ್ನು ತಡೆಹಿಡಿಯುವಂತೆ ಮನವಿ ಮಾಡಿದ್ದಾರೆ.