ಪಾಲಿಬೆಟ್ಟದಲ್ಲಿ ಸ್ಯಾನಿಟೈಸ್ ಸಿಂಪಡಣೆ

26/06/2020

ಮಡಿಕೇರಿ ಜೂ.26 : ಕೊರೋನಾ ಸೋಂಕಿತರು ಪತ್ತೆಯಾದ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದಲ್ಲಿ ಸ್ಯಾನಿಟೈಸ್ ಸಿಂಪಡಣೆ ಕಾರ್ಯ ನಡೆಯಿತು. ಪೊಲೀಸರು, ಅಗ್ನಿ‌ಶಾಮಕ ದಳದ ಸಿಬ್ಬಂದಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಆರೋಗ್ಯ ಸುರಕ್ಷತಾ ಕಾರ್ಯದಲ್ಲಿ ತೊಡಗಿದ್ದಾರೆ. ಪಾಲಿಬೆಟ್ಟದ ದಂಪತಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.