ಕೊಡಗಿನಲ್ಲಿ ಜೂ. 27 ರಿಂದ ಅರ್ಧ ದಿನ ಮಾತ್ರ ವ್ಯಾಪಾರಕ್ಕೆ ಅವಕಾಶ : ಭಾನುವಾರ ಸಂಪೂರ್ಣ ಲಾಕ್‍ಡೌನ್ : ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿರ್ಧಾರ

26/06/2020

ಮಡಿಕೇರಿ ಜೂ. 26 : ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಕರಣ ಹೆಚ್ಚಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕೊಡಗಿನಲ್ಲಿ ಜೂ. 27 ರಿಂದ ಜುಲೈ 4 ರವರೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿರ್ಧರಿಸಿದೆ.

ಭಾನುವಾರ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಯಾವುದೇ ವ್ಯಾಪಾರ ವಹಿವಾಟಿಗೆ ಅವಕಾಶ ಇಲ್ಲ. ಕೊಡಗಿನ ವ್ಯಾಪರಸ್ಥರು ಸಹಕರಿಸುವಂತೆ ಜಿಲ್ಲಾ ಚೇಂಬರ್ ಅಧ್ಯಕ್ಷ ಎಂ.ಬಿ.ದೇವಯ್ಯ ಹೇಳಿಕೆ ನೀಡಿದ್ದಾರೆ.