ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಜಿಲ್ಲಾ ಬಿಜೆಪಿಯಿಂದ ನಗರ ಪೊಲೀಸ್ ಠಾಣೆಯಲ್ಲಿ ದೂರು

26/06/2020

ಮಡಿಕೇರಿ ಜೂ.26 : ಜಿಲ್ಲಾ ಕಾಂಗ್ರೆಸ್ ಪ್ರಮುಖ ಹಾಗೂ ಜಿ.ಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿ ಅಸಂವಿಧಾನಿಕ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ಮತ್ತು ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಪ್ರಮುಖರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕುಶಾಲನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ ಸಂದರ್ಭ ಶಶಿಧರ್ ನಾಲಿಗೆ ಹರಿ ಬಿಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.