ಗೋಣಿಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

June 26, 2020

ಮಡಿಕೇರಿ ಜೂ. 26 : ಜಿಲ್ಲಾ ಕಾಂಗ್ರೆಸ್ ಪ್ರಮುಖ ಹಾಗೂ ಜಿ. ಪಂ. ಮಾಜಿ ಸದಸ್ಯ ವಿ.ಪಿ. ಶಶಿಧರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿ ಅಸಂವಿಧಾನಿಕ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರಮುಖರು ಗೋಣಿಕೊಪ್ಪದಲ್ಲಿ ಪ್ರತಿಭಟನೆ ನಡೆಸಿದರು.
ವಿರಾಜಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಅವರ ನೇತೃತ್ವದಲ್ಲಿ ಗೋಣಿಕೊಪ್ಪ ಬಸ್ಸು ನಿಲ್ದಾಣದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮಾನವ ಸರಳಪಳಿ ರಚಿಸಿ ವಿ. ಪಿ. ಶಶಿಧರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಗೋಣಿಕೊಪ್ಪ ವೃತ್ತ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಸಂಘ ಪರಿವಾರದ ಎಲ್ಲಾ ಕಾರ್ಯಕರ್ತರು ಹಾಜರಿದ್ದರು.

error: Content is protected !!