ಬೆಳಗ್ಗೆ 8.30 ರಿಂದ ಸಂಜೆ 6 ಗಂಟೆವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ

26/06/2020

ಮಡಿಕೇರಿ ಜೂ.26 : ಕೋವಿಡ್-19 ಹಿನ್ನಲೆಯಲ್ಲಿ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು, ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಿರುವಂತೆ, ದೇವಸ್ಥಾನದ ದೈನಂದಿನ ಕಾರ್ಯಗಳು ಎಂದಿನಂತೆ ನಡೆಯಲಿದ್ದು, ಭಕ್ತಾದಿಗಳು/ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜೂನ್ 28 ರಿಂದ ಮುಂದಿನ ಹದಿನೈದು ದಿನಗಳವರೆಗೆ ಬೆಳಗ್ಗೆ 8.30 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಭಾಗಮಂಡಲ ಶ್ರೀ ಭಗಂಡೇಶ್ವರಿ-ತಲಕಾವೇರಿ ದೇವಾಲಯಗಳಲ್ಲಿ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.