ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆ

27/06/2020

ಮಡಿಕೇರಿ ಜೂ. 27 : ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 04 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಬೆಂಗಳೂರು ಪ್ರಯಾಣದ ಇತಿಹಾಸವಿರುವ 33 ವರ್ಷದ ಸ್ತ್ರೀಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರನ್ನು ನೇರವಾಗಿ ಕೊಡಗು ವೈದ್ಯಕೀಯ ಸಂಸ್ಥೆ ಅಧೀನದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಮಡಿಕೇರಿ ತಾಲ್ಲೂಕು ಮೂರ್ನಾಡು ಬಳಿಯ ಸುಭಾμï ನಗರದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ ಕೊಡ್ಲಿಪೇಟೆ ಹೋಬಳಿ ಶಿರಂಗಾಲ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 14 ವರ್ಷದ ಹುಡುಗಿಗೆ ಮತ್ತು ಕುಶಾಲನಗರದ ಹುಲುಸೆ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 08 ವರ್ಷದ ಹುಡುಗನಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಧಿಕಾರಿಯವರು ತಿಳಿಸಿದ್ದಾರೆ.
ಇದರೊಂದಿಗೆ ಹೊಸದಾಗಿ ಮೂರ್ನಾಡುವಿನಲ್ಲಿ ನಿಯಂತ್ರಿತ ಪ್ರದೇಶವನ್ನು ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. 03 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. 37 ಸಕ್ರಿಯ ಪ್ರಕರಣಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು 19 ಆಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.