ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಕೆಂಪೇಗೌಡರ ಜಯಂತಿ

June 27, 2020

ಮಡಿಕೇರಿ ಜೂ.27 : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆದರ್ಶ ಆಡಳಿತಗಾರ, ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಶನಿವಾರ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ದೀಪ ಬೆಳಗಿಸಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿ ಆಚರಣೆಯನ್ನು ನೆರವೇರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ ದರ್ಶನ್ ಇತರರು ಇದ್ದರು.

error: Content is protected !!