ಮರು ವಿನ್ಯಾಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ನೊಂದಣಿ : ಜೂ. 30 ಕೊನೆ ದಿನ

June 27, 2020


ಮಡಿಕೇರಿ ಜೂ.27 : 2020-21ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ 3 ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳು ಮಣಸು ಹಾಗೂ ಅಡಿಕೆ ಬಳೆಗಳಿಗೆ ಅನುಷ್ಟಾನಗೊಳಿಸಲಾಗುವುದು ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆರ್ದತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯ ವಿಮೆ ನೊಂದಣಿ ಅಂತಿಮ ದಿನಾಂಕ ಜೂನ್ 30 ಆಗಿರುತ್ತದೆ. 2020-21ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ಕಂತಿನ ವಿವರ ಇಂತಿದೆ: ಕಾಳುಮೆಣಸು ಬೆಳೆ ಪ್ರತಿ ಹೆಕ್ಟೇರ್‍ಗೆ 47,000 ರೂ. ವಿಮಾ ಮೊತ್ತ. ಪ್ರತಿ ಹೆಕ್ಟೇರ್‍ಗೆ ವಿಮಾ ಕಂತು 30%ದಲ್ಲಿ 14,100 ರೂ. ರೈತರು ಪಾವತಿಸಬೇಕಾಗಿರುವ ಕಂತು 5% ನಲ್ಲಿ 2,350 ರೂ.
ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ 1,28,000 ರೂ. ಪ್ರತಿ ಹೆಕ್ಟೇರ್‍ಗೆ ವಿಮಾ ಕಂತು 30%ದಲ್ಲಿ 38,400 ರೂ. ರೈತರು ಪಾವತಿಸಬೇಕಾಗಿರುವ ಕಂತು 5% ನಲ್ಲಿ 6,400 ರೂ. ಆಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಕೂಡಲೇ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

error: Content is protected !!