ಕೊಡಗಿನಲ್ಲಿ 20 ನಿಯಂತ್ರಿತ ಪ್ರದೇಶಗಳ ಮೇಲೆ ನಿಗಾ

28/06/2020

ಮಡಿಕೇರಿ ಜೂ.28 : ಕೊರೋನಾ ಸೋಂಕು ಹಿನ್ನೆಲೆ ಜಿಲ್ಲೆಯಲ್ಲಿರುವ 20 ನಿಯಂತ್ರಿತ ಪ್ರದೇಶಗಳ ಮೇಲೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನಿಗಾ ಇರಿಸಿದೆ. ಹೊಸದಾಗಿ ಕುಶಾಲನಗರದ ಅಣ್ಣೇಗೌಡ ಬಡಾವಣೆ ಮತ್ತು ವೀರಾಜಪೇಟೆ ನಗರದ ಮೀನುಪೇಟೆಯನ್ನು ನಿಯಂತ್ರಿತ ಪ್ರದೇಶವನ್ನಾಗಿ ಮಾಡಲಾಗಿದೆ. ಇದರೊಂದಿಗೆ ನಿಯಂತ್ರಿತ ಪ್ರದೇಶಗಳ ಸಂಖ್ಯೆಯೂ 20ಕ್ಕೆ ಏರಿಕೆಯಾದಂತಾಗಿದೆ. ನಾಪೋಕ್ಲುವಿನ ವ್ಯಕ್ತಿ ನೇರವಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವುದರಿಂದ ಹೊಸದಾಗಿ ನಿಯಂತ್ರಿತ ಪ್ರದೇಶ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.