ಬೆಂಗಳೂರಿನಲ್ಲಿ 1 ತಿಂಗಳು ನಿಷೇಧಾಜ್ಞೆ

29/06/2020

ಬೆಂಗಳೂರು ಜೂ.29 : ಕೊರೋನಾ ತಡೆಗಟ್ಟಲು ಬೆಂಗಳೂರು ನಗರದಲ್ಲಿ ಮತ್ತೆ ಒಂದು ತಿಂಗಳ ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಜುಲೈ 26 ರವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತೆ ಕಟ್ಟುನಿಟ್ಟಾಗಿ ಕ್ರಮಗಳನ್ನು ಜಾರಿಗೊಳಿಸಿದ್ದಾರೆ.