ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸಲಹೆ

29/06/2020

ಮಡಿಕೇರಿ ಜೂ.29 : ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸಲಹೆ ನೀಡಿದ್ದಾರೆ. ಮಡಿಕೇರಿ ಹಾಗೂ ಸೋಮವಾರಪೇಟೆಯ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ತುಂಬಿದರು. ಬಿಸ್ಕೆಟ್ ಗಳನ್ನು ವಿತರಿಸಿದ ಶಾಸಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂದರು.