ವಿವಿಧ ಬೇಡಿಕೆಗಳ ಈಡೇರಿಕೆಗೆ ಕುಂಬಾರಗಡಿಗೆ ರೈತ ಸಂಘ ಆಗ್ರಹ

June 29, 2020

ಮಡಿಕೇರಿ ಜೂ. 29 : ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕುಂಬಾರಗಡಿಗೆ ರೈತ ಸಂಘದಿಂದ ಜಿಲ್ಲಾ ಉಪವಿಭಾಗಾಧಿಕಾರಿ ಟಿ.ಜವರೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲಿ ಗ್ರಾಮಸ್ಥರಿಗೆ ಮಾಸ್ಕ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಕುಂಬಾರಗಡಿಗೆ ರೈತ ಸಂಘದ ವತಿಯಿಂದ ಕುಂಬಾರಗಡಿಗೆ ಮೈದಾನದಲ್ಲಿ ರೈತರ ಸಭೆ ನಡೆಸಿ ಗ್ರಾಮಕ್ಕೆ ಮೂಲ ಭೂತ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರಿ.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

error: Content is protected !!