ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಶಾಸಕ ಅಪ್ಪಚ್ಚುರಂಜನ್ ಭೇಟಿ : ಪರಿಶೀಲನೆ

29/06/2020

ಮಡಿಕೇರಿ ಜೂ. 29 : ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಶಾಸಕ ಅಪ್ಪಚ್ಚುರಂಜನ್ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಸಿದ್ಧತೆ ಹಾಗೂ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳು ಒತ್ತಡ ಹಾಗೂ ಆತಂಕಕ್ಕೆ ಒಳಗಾಗದೆ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಮಾನಸಿಕ ಧೈರ್ಯ ತುಂಬಿದರು.
ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ ಅವರು, ಯಾವುದೇ ಅನುಮಾನಗಳಿದ್ದರೆ ಶಿಕ್ಷಕರುಗಳಿಂದ ಸಲಹೆ ಪಡೆಯುವಂತೆ ತಿಳಿಸಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ಪೊಟ್ಟಣ ವಿತರಣೆ ಮಾಡಿದರು.
ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಸ್ಥಳದಲ್ಲಿದ್ದು ವಿದ್ಯಾರ್ಥಿಗಳಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿದರು.