ಜು. 2 ರಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಜಿಲ್ಲಾ ಪ್ರವಾಸ

29/06/2020

ಮಡಿಕೇರಿ ಜೂ.29 : ಸಹಕಾರ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಜುಲೈ 2 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಜುಲೈ 2 ರಂದು ನಗರದಲ್ಲಿ ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಪ್ರೋತ್ಸಾಹಧನ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಅಪರಾಹ್ನ 12 ಗಂಟೆಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಗತಿ ಪರಿಶೀಲನಾ ಸಭೆಯನ್ನು ನಗರದಲ್ಲಿ ನಡೆಸಲಿದ್ದಾರೆ ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.