ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ 160 ಮಂದಿ ದಾಖಲು

June 29, 2020

ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 
      ಇತರೆ ದೇಶ/ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. 
ಇತರೆ ದೇಶ/ರಾಜ್ಯ/ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರ ಪೈಕಿ ಸಂಪರ್ಕ ತಡೆಯಲ್ಲಿರುವ ಜನರ ವಿವರ ಕೆಳಕಂಡಂತಿದೆ.
1. ಇತರೆ ದೇಶದ  ಜನರು- 192. ಇತರೆ ರಾಜ್ಯದ ಜನರು-646 3.  ಒಟ್ಟು ಜನರು-665
ಪ್ರಯೋಗಾಲಯ ಪರೀಕ್ಷಾ ವರದಿ ವಿವರ:
ಇಲ್ಲಿಯವರೆಗೆ ಒಟ್ಟು  8425 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. • ಪಾಸಿಟಿವ್ ಪ್ರಕರಣಗಳು- 46 (ಮೂವರು ಗುಣಮುಖರಾಗಿದ್ದಾರೆ)• ನೆಗೆಟಿವ್ ವರದಿ ಬಂದ ಪ್ರಕರಣಗಳು-7514• ವರದಿ ನಿರೀಕ್ಷಿತ ಪ್ರಕರಣಗಳು-865
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ  ದಾಖಲಿರುವ ಪ್ರಕರಣಗಳು:
          ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ  160  ಜನರು ದಾಖಲಿರುತ್ತಾರೆ.
ಇತರೆ ವಿಷಯಗಳು: 
ಕೊಡಗು ಜಿಲ್ಲೆಯಲ್ಲಿ ಈ ದಿನ ಹೊಸದಾಗಿ 03 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. ವಿವರ ಕೆಳಕಂಡಂತಿದೆ. 
1. ಈ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 32 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. 

2. ಈ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ್ದ ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 27 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ 

3. ವಿರಾಜಪೇಟೆ ತಾಲ್ಲೂಕು ಚೆನ್ನಯ್ಯನಕೋಟೆ  ಗ್ರಾಮದ ಹೊಲಮಾಳ ಪ್ರದೇಶದ ನಿವಾಸಿ, ಬೆಂಗಳೂರಿನಿಂದ ಜಿಲ್ಲೆಗೆ ಹಿಂದಿರುಗಿದ್ದ 37 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. 
ವಿರಾಜಪೇಟೆ ತಾಲ್ಲೂಕು ಚೆನ್ನಯ್ಯನಕೋಟೆ ಗ್ರಾಮದ ಹೊಲಮಾಳದಲ್ಲಿ ಹೊಸದಾಗಿ ನಿಯಂತ್ರಿತ ಪ್ರದೇಶ (Containment Zone) ವನ್ನು ತೆರೆಯಲಾಗಿದೆ. 
ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ:46 ಕ್ಕೇರಿದ್ದು, 03 ಪ್ರಕರಣ ಬಿಡುಗಡೆಗೊಂಡಿರುತ್ತಾರೆ. 43 ಪ್ರಕರಣಗಳು ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.  ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು-21 ಆಗಿರುತ್ತದೆ. 

error: Content is protected !!