ರಫೇಲ್ ಯುದ್ಧ ವಿಮಾನಗಳ ನಿರೀಕ್ಷೆ

30/06/2020

ನವದೆಹಲಿ ಜೂ.30 : ಮೊದಲ ಹಂತದಲ್ಲಿ ಆರು ರಫೇಲ್ ಯುದ್ಧ ವಿಮಾನಗಳು ಜು.27ರೊಳಗೆ ದೇಶಕ್ಕೆ ಆಗಮಿಸುವ ಸಾಧ್ಯತೆಯಿದೆ. ಇದು ಭಾರತೀಯ ವಾಯುಪಡೆಯ ಯುದ್ಧ ಸಾಮಥ್ರ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಪೂರ್ವ ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಚೀನಾ ಪಡೆಗಳ ಜೊತೆಗೆ ಸಂಘರ್ಷದಲ್ಲಿ 20 ಯೋಧರು ಹುತಾತ್ಮರಾದ ಬಳಿಕ ಉಭಯ ದೇಶಗಳ ನಡುವಣ ಪರಿಸ್ಥಿತಿ ಹದಗೆಟ್ಟಿರುವಂತೆಯೇ ವಾಯುಪಡೆ ಹೈ ಆಲರ್ಟ್ ಆಗಿದೆ.
ಜೂನ್ 2ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರೆಂಚ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲೆ ಜೊತೆ ದೂರವಾಣಿ ಸಂಭಾಷಣೆ ನಡೆಸಿದ್ದು, ಫ್ರಾನ್ಸ್ನಲ್ಲಿ ಕೊರೋನಾವೈರಸ್ ಸಾಂಕ್ರಾಮಿಕ ರೋಗ ಇದ್ದರೂ ನಿಗದಿಯಾಗಿರುವಂತೆ ಭಾರತಕ್ಕೆ ಯುದ್ಧ ವಿಮಾನಗಳನ್ನು ತಲುಪಿಸಲಾಗುವುದು ಎಂದು ಅವರು ಹೇಳಿದ್ದಾರೆ.